ತಿರುವನಂತಪುರ: ಭಾರತ್ ಜೋಡೊ ಯಾತ್ರೆಗೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ವ್ಯಾಪಾರಿಯೊಬ್ಬರಿಗೆ ಬೆದರಿಕೆ ಹಾಕಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದ್ದು, ಮೂವರು ಕಾರ್ಯಕರ್ತರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ವ್ಯಾಪಾರಿಗೆ ಬೆದರಿಕೆ ಹಾಕುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇರಳ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಕೆ. ಸುಧಾಕರನ್, ‘ಘಟನೆಯಲ್ಲಿ ಭಾಗಿಯಾದ ಮೂವರು ಕಾರ್ಯಕರ್ತರನ್ನು ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.