Home ಟಾಪ್ ಸುದ್ದಿಗಳು ಭಾರತ ತೊರೆದ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಅಪರಾಧಿಗಳು

ಭಾರತ ತೊರೆದ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಅಪರಾಧಿಗಳು

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಮೂವರು ಭಾರತ ತೊರೆದಿದ್ದಾರೆ.


ಮುರುಗನ್, ರಾಬರ್ಟ್ ಪಯಸ್ ಹಾಗೂ ಜಯಕುಮಾರ್ ಅವರನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಶಿಫಾರಸು ಮಾಡಿತ್ತು. ಸುಪ್ರೀಂಕೋರ್ಟ್ 2022ರಲ್ಲಿ ಒಟ್ಟು ಆರು ಮಂದಿಯನ್ನು ಬಿಡುಗಡೆ ಮಾಡಿತ್ತು. ಅವರಲ್ಲಿ ಈ ಮೂವರು ಕೂಡ ಸೇರಿದ್ದಾರೆ. ಇವರು ಕೊಲಂಬೋಗೆ ತೆರಳಿದ್ದಾರೆ.


ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಬಂಧಿಸಲಾಗಿದ್ದ ತಿರುಚಿರಾಪಳ್ಳಿಯ ವಿಶೇಷ ಶಿಬಿರದಿಂದ ಇಂದು ಮುಂಜಾನೆ ಪೊಲೀಸ್ ಅಧಿಕಾರಿಗಳ ತಂಡ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಲ್ಲಾ ಮೂವರು ಪುರುಷರನ್ನು ಕರೆದೊಯ್ಯಲಾಯಿತು. ಈ ಮೂವರು ಶ್ರೀಲಂಕಾ ಪ್ರಜೆಗಳು ಎಂದು ತಿಳಿದು ಬಂದಿದೆ.

Join Whatsapp
Exit mobile version