ಮೂವರು ಡಿಸಿಎಂ ನೇಮಕ ಮಾಡಬೇಕು: ಸಹಕಾರ ಸಚಿವ ಕೆ.ಎನ್. ರಾಜಣ್ಣ

Prasthutha|

ತುಮಕೂರು: ತಣ್ಣಗಾಗಿದ್ದ ಮೂವರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಲೋಕಸಭೆ ಚುನಾವಣೆ ನಂತರ ಮತ್ತೆ ಸದ್ದು ಮಾಡಿದೆ. ಮೂವರು ಡಿಸಿಎಂ ನೇಮಕ ಮಾಡಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ.

- Advertisement -

ತುಮಕೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರಲಿದೆ. ಇನ್ನಾದರೂ ಮೂವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಅದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬದಲಾವಣೆ ಮಾಡಿದರೆ ಅಭ್ಯಂತರವಿಲ್ಲ. ಉಸ್ತುವಾರಿ ಮಾಡುವಂತೆ ನಾನು ಕೇಳಿರಲಿಲ್ಲ. ಬೇಕಿದ್ದರೆ ಬದಲಾವಣೆ ಮಾಡಿಕೊಳ್ಳಲಿ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ.

- Advertisement -

ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬಂದು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುತ್ತಾರಾ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಆಗುವುದಿದ್ದರೆ ಬಹಳ ಹಿಂದೆಯೇ ಆಗಬೇಕಿತ್ತು. ಈಗ ಅಂತಹ ಸಾಧ್ಯತೆಗಳಿಲ್ಲ. ಡಿ.ಕೆ.ಶಿವಕುಮಾರ್ ಸಹ ಮುಖ್ಯಮಂತ್ರಿಯಾಗಲು ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.

Join Whatsapp