ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇನಲ್ಲಿ ಸರಣಿ ಅಪಘಾತ: ಮೂವರು ಮೃತ್ಯು

Prasthutha|

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.

- Advertisement -

ಮಳೆಯಿಂದ ನಿಯಂತ್ರಣ ತಪ್ಪಿ ಡಿವೈಡರ್​ ದಾಟಿದ್ದ ಫಾರ್ಚೂನರ್ ಕಾರು, ಎದುರಿಗೆ ಬರುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು, ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

 ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp