ನಿಂತಿದ್ದ ಮಿನಿ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

Prasthutha|

ವಿಜಯನಗರ: ನಿಂತಿದ್ದ ಮಿನಿ ಲಾರಿಗೆ, ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟರು ತಾಲೂಕಿನ ಸಾಲವಾಡ ಕ್ರಾಸ್ ಬಳಿ ಈ ಘಟನೆ ನಡೆದಿದೆ.

- Advertisement -

ಗಜಾಪುರದ ಮಿನಿ ಲಾರಿ ಚಾಲಕ ಗುರುವಣ್ಣ (40), ಬತ್ತನಹಳ್ಳಿಯ ತಿಪ್ಪಣ್ಣ (55), ಬಸವರಾಜ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ನಿಂತಿದ್ದ ಮಿನಿ ಲಾರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಎಸ್ಪಿ ಶ್ರೀಹರಿಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಎನ್.ಟಿ. ಶ್ರೀನಿವಾಸ ಅವರು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.