ಮೈಸೂರಿನಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Prasthutha|

ಪಿರಿಯಾಪಟ್ಟಣ: ಬೆಳ್ಳಂಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.

- Advertisement -

ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮುದಾಸೀರ್, ಮುಜಾಯಿದ್, ಅಹ್ಮದ್​​​ ಪಾಷಾ  ಮೃತಪಟ್ಟಿದ್ದಾರೆ.

- Advertisement -

ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಪುತ್ತೂರು ಮೂಲದ ಯುವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ.

ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪುತ್ತೂರಿನ ಯುವಕರು

Join Whatsapp