Home ಟಾಪ್ ಸುದ್ದಿಗಳು ರಷ್ಯಾದ ಸೇನೆಯಲ್ಲಿ ಕರ್ನಾಟಕದ ಮೂವರು: ನಮ್ಮನ್ನು ರಕ್ಷಿಸಿ ಎಂದ ಯುವಕರು

ರಷ್ಯಾದ ಸೇನೆಯಲ್ಲಿ ಕರ್ನಾಟಕದ ಮೂವರು: ನಮ್ಮನ್ನು ರಕ್ಷಿಸಿ ಎಂದ ಯುವಕರು

ಕಲಬುರಗಿ: ಯುದ್ಧ ಪೀಡಿತ ಉಕ್ರೇನ್ ಗಡಿಯಲ್ಲಿ ಕಲಬುರಗಿಯ ಮೂವರು ಯುವಕರು ಸಿಕ್ಕಿಬಿದ್ದಿದ್ದು, ನಮ್ಮನ್ನು ಕೂಡಲೇ ರಕ್ಷಿಸಬೇಬೇಕೆಂದು ಮನವಿ ಮಾಡಿದ್ದಾರೆ.


ತೆಲಂಗಾಣದ 22 ವರ್ಷದ ಯುವಕ ಮತ್ತು ಕಲಬುರಗಿಯ ಮೂವರು ವ್ಯಾಗ್ನರ್ ಪಡೆಯಲ್ಲಿ ಕೆಲಸ ಮಾಡುತ್ತಿದ್ದು, ರಷ್ಯಾ ಗಡಿಯಲ್ಲಿ ಸಿಲುಕಿದ್ದಾರೆ. ನಮ್ಮನ್ನು ನಕಲಿ ಸೇನಾ ಉದ್ಯೋಗ ದಂಧೆಯಿಂದ ತಕ್ಷಣವೇ ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ.


ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯ ಮೊಹಮ್ಮದ್ ಸುಫಿಯಾನ್ ತನ್ನ ಕುಟುಂಬಕ್ಕೆ ಕಳುಹಿಸಿದ ವಿಡಿಯೋದಲ್ಲಿ ನಾವು ಹೈಟೆಕ್ ವಂಚನೆಗೆ ಬಲಿಯಾಗಿದ್ದೇವೆ. ನಮ್ಮ ಇಚ್ಛೆಗೆ ವಿರುದ್ಧವಾಗಿ ಉಕ್ರೇನ್ನೊಂದಿಗೆ ರಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸಲಾಗುತ್ತಿದೆ. ದಯವಿಟ್ಟು ನಮ್ಮನ್ನು ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.

Join Whatsapp
Exit mobile version