Home ಟಾಪ್ ಸುದ್ದಿಗಳು ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕಿಡಿಗೇಡಿಯೊಬ್ಬ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳ ಮೂಲದವ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. 

Join Whatsapp
Exit mobile version