ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಸ್ಫೋಟ: ವೃದ್ಧೆ ಸೇರಿದಂತೆ ಮೂವರು ಸಾವು

Prasthutha|

ಚೆನ್ನೈ: ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ ವೃದ್ಧೆ ಸೇರಿದಂತೆ ಮೂವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಗಾಯಾಳುಗಳನ್ನು ನಾಮಕ್ಕಲ್ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಶನಿವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ನಾಮಕ್ಕಲ್ ಜಿಲ್ಲಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

ಹೊಸ ವರ್ಷಾಚರಣೆಗಾಗಿ ಮನೆಯಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿದ್ದು, ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಫೋಟ ಸಂಭವಿಸಿದೆ. ಮನೆಯಲ್ಲಿದ್ದ ವೃದ್ಧೆ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp