ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕದಲ್ಲಿ ಭಾರಿ ಸ್ಫೋಟ: ಮೂವರು ಸಾವು, 40 ಜನರಿಗೆ ಗಾಯ

Prasthutha|

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ದ ಹಲ್ದಿಯಾದಲ್ಲಿ ಸ್ಪೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿ, ಮೂವರು ಮೃತಪಟ್ಟಿದ್ದಾರೆ. 40 ಜನರಿಗೆ ಗಾಯಗಳಾಗಿವೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

ಪೊಲೀಸರು, ರಕ್ಷಣಾ ಸಿಬ್ಬಂದಿ ಗಾಯಾಳುಗಳ ರಕ್ಷಣೆಗೆ ಕಾರ್ಯಾಚರಣೆ ಕೈಗೊಂಡಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಹಲ್ದಿಯಾದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಆವರಣದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸುಟ್ಟು ಕರಕಲಾಗಿದ್ದು, 40 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಐಒಸಿಎಲ್ ಆಸ್ಪತ್ರೆ ಮತ್ತು ಕೋಲ್ಕತ್ತಾ ಪೋರ್ಟ್ ಟ್ರಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಕಂಪನಿಯಲ್ಲಿ ಅಣಕು ಡ್ರಿಲ್ ನಡೆಸಲಾಗುತ್ತಿದ್ದ ವೇಳೆ ಘಟನೆ ನಡೆದಿದೆ. 10 ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Join Whatsapp