Home ಟಾಪ್ ಸುದ್ದಿಗಳು ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಮೂವರ ಸಾವು, 50 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಮೂವರ ಸಾವು, 50 ಮಂದಿ ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ರಾಜ್ಯದ ಹಲವಡೆ ಸಂಭವಿಸಿದ ಮೇಘಸ್ಫೋಟದ ಪರಿಣಾಮ ಮೂವರು ಸಾವಿಗೀಡಾಗಿದ್ದು, 50 ಮಂದಿ ನಾಪತ್ತೆಯಾಗಿದ್ದಾರೆ.
ಭಾರಿ ಮಳೆಯಿಂದಾಗಿ ಅನೇಕ ಮನೆಗಳು, ಸೇತುವೆಗಳು ಹಾಗೂ ರಸ್ತೆಗಳು ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.


ಕುಲ್ಲುವಿನ ನಿರ್ಮಂದ್, ಸೈಂಜ್ ಮತ್ತು ಮಲಾನಾ ಪ್ರದೇಶಗಳಲ್ಲಿ, ಮಂಡಿಯ ಪಾಧಾರ್ ಮತ್ತು ಶಿಮ್ಲಾ ಜಿಲ್ಲೆಯ ರಾಂಪುರದಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.


ಶಿಮ್ಲಾ ಜಿಲ್ಲೆಯ ರಾಂಪುರದ ಉಪವಿಭಾಗದಲ್ಲಿರುವ ಸಮೇಜ್ ಖುದ್ನಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಇಬ್ಬರು ಮೃತಪಟ್ಟು, 28 ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ಪಿಟಿಐಗೆ ತಿಳಿಸಿದ್ದಾರೆ.

Join Whatsapp
Exit mobile version