ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗದ್ದೆಗೆ ನುಗ್ಗಿದ ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ. ಸತೀಶ ಪಾಂಡುರಂಗ ನಾಯ್ಕ(40), ಉಲ್ಲಾಸ ಗಾವಡಿ(50) ಮೃತರು.
ಗುಡ್ಡ ಕುಸಿದು ಮನೆಯಲ್ಲಿ ಸಿಲುಕಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ. ಝರೀನಾ(46) ಮೃತ ಮಹಿಳೆ. ಓರ್ವ ಯುವತಿಯನ್ನ ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ಮಾಡಿ ರಕ್ಷಣೆ ಮಾಡಲಾಗಿದೆ.