ಆಟೋ-ಮಿನಿ ಬಸ್ ಡಿಕ್ಕಿ: ಮೂವರು ಸಾವು

Prasthutha|

ಗದಗ: ಎಲ್’ಪಿಜಿ ಆಟೋ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು ಹಲವರು ಗಾಯಗೊಂಡಿರುವ ದಾರುಣ ಘಟನೆ ಬೆಟಗೇರಿ ಸಮೀಪದ ಗಜೇಂದ್ರಗಡ ರಸ್ತೆಯ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ.

- Advertisement -


ಬೆಟಗೇರಿಯ ನರಸಾಪೂರ ಆಶ್ರಯ ಕಾಲೋನಿಯ ಸಯ್ಯದ್ ಅಲಿ (20), ಪ್ರದೀಪ್ (40) ಹಾಗೂ ಬೆಟಗೇರಿ ನಿವಾಸಿ ಮಂಜುನಾಥ್ ಮೃತಪಟ್ಟವರು.


ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದ್ದ ಮದುವೆ ಮುಗಿಸಿ ಬೆಟಗೇರಿ ಕಡೆ ಬರುತ್ತಿದ್ದ ಮಿನಿ ಬಸ್, ನರೇಗಲ್ ಕಡೆ ಹೊರಟಿದ್ದ ಎಲ್’ಪಿಜಿ ಆಟೋ ನಡುವೆ ಅಪಘಾತ ನಡೆದಿದೆ. ಗಾಯಗೊಂಡವರು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಅವರಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ.

- Advertisement -


ಆಟೋ ಹಾಗೂ ಮಿನಿ ಬಸ್ ನಡುವೆ ನಡೆದ ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಲ್ಲದೇ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದ ಸುದ್ದಿ ತಿಳಿದ ಕೂಡಲೇ ಬೆಟಗೇರಿ ಪೊಲೀಸರು ಹಾಗೂ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Join Whatsapp