ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: ಮಂಗಳೂರಿನ ಮೂವರು ಯುವಕರು ಮೃತ್ಯು

Prasthutha|

ರಿಯಾದ್: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ.
ಹಳೆಯಂಗಡಿ ಬಳಿಯ ಕದಿಕೆ ನಿವಾಸಿ ರಿಝ್ವಾನ್, ಸುರತ್ಕಲ್ ಕೃಷ್ಣಾಪುರದ ಶಿಹಾಬ್, ಮಂಗಳೂರು ಬೆಂಗರೆ ನಿವಾಸಿ ಅಕೀಲ್ ಹಾಗೂ ಬಾಂಗ್ಲಾದೇಶದ ಪ್ರಜೆ ನಾಸೀರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

- Advertisement -


ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಕಳೆದ ರಾತ್ರಿ ಈ ಅಪಘಾತ ಸಂಭವಿಸಿದೆ.

ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು SAQCO ಎಂಬ ಕಂಪನಿಯಲ್ಲಿ ನೌಕರರಾಗಿದ್ದರು. ಕಾರಿನಲ್ಲಿದ್ದ ಓರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

- Advertisement -

ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ.


Join Whatsapp