ಟ್ಯಾಂಕರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

Prasthutha|

ಚಿತ್ರದುರ್ಗ: ಟ್ಯಾಂಕರ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್‌ಗೇಟ್ ಬಳಿ ನಡೆದಿದೆ.

- Advertisement -

ಟೋಲ್ ಗೇಟ್ ಬಳಿ ನಿಂತಿದ್ದ ಟ್ಯಾಂಕರ್ ಗೆ ವೇಗವಾಗಿ ಬಂದ ಕಾರು ಡಿಕ್ಕಿಹೊಡೆದಿದ್ದು , ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈವರೆಗೆ ಮೃತರ ಗುರುತು ಪತ್ತೆ ಆಗಿಲ್ಲ. ಹಿರಿಯೂರು ಪೊಲೀಸರು  ಸ್ಥಳಕ್ಕೆ  ಭೇಟಿ  ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp