Home ಟಾಪ್ ಸುದ್ದಿಗಳು ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ: ಮೂವರು ಕಾರ್ಮಿಕರು ಸಾವು

ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ: ಮೂವರು ಕಾರ್ಮಿಕರು ಸಾವು

ಗಾಂಧಿನಗರ: ಗುಜರಾತ್ ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್ ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.


ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್ ಗಳು ಕುಸಿದು ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆನಂದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.


ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ತಿಳಿಸಿದ್ದಾರೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (NHSRCL) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು ಸ್ಪಷ್ಟನೆ ನೀಡಿದೆ.

Join Whatsapp
Exit mobile version