ಚಾಮರಾಜನಗರ: ಬಿಳಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದ ಬಿಸಲ್ವಾಡಿಯಲ್ಲಿ ನಡೆದಿದೆ.
ಕುಮಾರ್ (28), ಶಿವರಾಜು (35) ಹಾಗೂ ಸಿದ್ದರಾಜು (27) ಮೃತ ದುರ್ದೈವಿಗಳು.
ಮೃತರು ಕಾಗಲವಾಡಿಯ ಮೊಳೆ ಗ್ರಾಮದವರಾಗಿದ್ದು ಕ್ವಾರಿಗೆ ಕುಳಿ ಹೊಡೆಯಬೇಕಾದರೆ ಈ ಅವಘಡ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಸಿದ್ದರಾಜುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.