ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Prasthutha|

ಬೆಂಗಳೂರು: ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿ, ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ನಡೆದಿದೆ.
ಹೆಣ್ಣೂರಿನ ಬೆಂಕಿ ಹಚ್ಚಿಕೊಂಡ ಇಬ್ಬರು ಪುತ್ರಿಯರು, ಪತ್ನಿ ಸಾವನ್ನಪ್ಪಿದ್ದು ಪತಿಯ ಸ್ಥಿತಿ ಗಂಭೀರವಾಗಿದೆ.

- Advertisement -


ನೇತ್ರಾವತಿ(37), ಮಕ್ಕಳಾದ ವರ್ಷಿತಾ(12), ಸ್ನೇಹಾ (9)ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿ ಸೊನ್ನೇಗೌಡ (48)ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.



Join Whatsapp