Home ಟಾಪ್ ಸುದ್ದಿಗಳು ತಾಯಿ, ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ತಾಯಿ, ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ ಯಶೋಧಾ (70), ಮಗಳು ಸುಮನ್ (41) ಹಾಗೂ ಮಗ ನರೇಶ್ ಗುಪ್ತಾ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳು. ಮೃತ ನರೇಶ್ ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದ ಎಂದು ತಿಳಿದುಬಂದಿದೆ.

ಯಶೋಧಾ ಅವರ ಮೂವರು ಮಕ್ಕಳ ಪೈಕಿ ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿರುವ ಮಗಳು ತನ್ನ ತಾಯಿಗೆ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸಿಲ್ಲ. ಈ ಹಿನ್ನಲೆ ಮಗಳು ಮನೆಗೆ ಬಂದಾಗ ಹೊರಗೆ ಚಪ್ಪಲಿ, ಕಾರು ಇತ್ತು. ಮನೆ ಒಳಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಮಹಾಲಕ್ಷ್ಮಿ ಲೇಔಟ್ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಮೃತದೇಹಗಳನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ತನಿಖೆ  ಮುಂದುವರಿದಿದೆ.

 ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.

Join Whatsapp
Exit mobile version