ಬಸ್- ಕಾರು ಅಪಘಾತ: ಒಂದೇ ಕುಟುಂಬದ ಮೂವರು ಸಾವು, ನಾಲ್ವರು ಗಂಭೀರ

Prasthutha|

ವಿಜಯಪುರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರುಗಳ ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಲ್ಹಾರ ತಾಲ್ಲೂಕಿನ ಕುಪಕಡ್ಡಿ ಕ್ರಾಸ್ ಬಳಿ ನಡೆದಿದೆ.

- Advertisement -

ಕಲಬುರಗಿ ಮೂಲದ ಕಲಶೆಟ್ಟಿ ಕುಟುಂಬದವರಾದ ತಾಯಿ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ( 25) ಹಾಗೂ ಮಗು ಸುಮನ್ (3 ತಿಂಗಳು) ಕಾರಿನಲ್ಲೇ ಮೃತಪಟ್ಟರೇ ಶರಣಮ್ಮ ಬಸವರಾಜ್ ಕಲಶೆಟ್ಟಿ (55) ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಉಮೇಶ ಕಲಶೆಟ್ಟಿ ಮತ್ತು ಅವರ ಪತ್ನಿ ಸುರೇಖಾ ಹಾಗೂ ಮಕ್ಕಳಾದ ಸುಹಾನ್ (8 ತಿಂಗಳು) ಮತ್ತು ಸಾನ್ವಿ (2) ಗಂಭೀರವಾಗಿ ಗಾಯಗೊಂಡಿದ್ದಾರೆ.


ಬಾಗಲಕೋಟೆಯಿಂದ ವಿಜಯಪುರಕ್ಕೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿಗೆ ಬರುತ್ತಿದ್ದ ಎರಡು ಕಾರುಗಳಲ್ಲಿ ಒಂದು ಕಾರು ಹಿಂದಿಕ್ಕುವ ಬರದಲ್ಲಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp