ರಾಜಸ್ಥಾನ: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೈಪುರದಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಝಲಾವರ್ ಜಿಲ್ಲೆಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದ ಎರಡು ನವಜಾತ ಶಿಶುಗಳು ಮಂಗಳವಾರ ಸಾವನ್ನಪ್ಪಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಅನಾರೋಗ್ಯಕ್ಕೆ ಒಳಗಾದ ರೋಗಿಗಳ ಸಂಖ್ಯೆ 3965ಕ್ಕೆ ಏರಿದೆ.
ಬಿಸಿಲಿನ ತಾಪಮಾನದಿಂದಾಗಿ ಈ ಹಿಂದೆ ರಾಜಸ್ಥಾನದಲ್ಲಿ ಆರು ಮಂದಿ ಮೃತಪಟ್ಟಿದ್ದರು.
ರಾಜಸ್ಥಾನದ ಬಹುತೇಕ ಎಲ್ಲಾ ನಗರಗಳಲ್ಲಿ ಮಂಗಳವಾರ 45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಾಗಿದೆ.