ನದಿಯಲ್ಲಿ ಮೂವರು ಮುಸ್ಲಿಮ್ ಬಾಲಕರ ಮೃತದೇಹ ಪತ್ತೆ| ಕೊಲೆ ಶಂಕೆ

Prasthutha: July 9, 2021

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಬಹೇರಿ ಕಿಚ್ಚಾ ನದಿಯಲ್ಲಿ ಮೂವರು ಮುಸ್ಲಿಮ್ ಬಾಲಕರ ಮೃತದೇಹ ಪತ್ತೆಯಾಗಿದ್ದು, ಇವರನ್ನು ಕೊಲೆ ಮಾಡಿ ನದಿಗೆ ಎಸೆಯಲಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಮೃತದೇಹಗಳಲ್ಲಿ ಕಾಣುವ ಗಾಯದ ಗುರುತುಗಳು ಕೊಲೆ ನಡೆಸಿರುವುದನ್ನು ಸ್ಪಷ್ಟಪಡಿಸಿತ್ತದೆ ಎಂದು ಸಂಬಂಧಿಕರೊಬ್ಬರು ಹೇಳಿದ್ದಾರೆ. ಒಂದೇ ಕುಟುಂಬದ ಸದಸ್ಯರಾದ ಸಮೀನ್ ಅಲಿ(16), ಮೊಹಮ್ಮದ್ ಔಸಾಫ್ (18) ಮತ್ತು ಸೈಯದ್ (16) ಅವರ ಮೃತದೇಹಗಳು ನದಿಯಲ್ಲಿ ಪತ್ತೆಯಾಗಿದೆ.

ಮೃತದೇಹದ ಮೇಲೆ ತೀವ್ರ ಗಾಯಗಳಿವೆ. ಕುತ್ತಿಗೆ ಮುರಿಯಲ್ಪಟ್ಟ ಸ್ಥಿತಿಯಲ್ಲಿದ್ದು, ಗುರುತು ಸಿಗದಂತೆ ವಿರೂಪಗೊಂಡಿದೆ ಎಂದು ಸಂಬಂಧಿಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಬಾಲಕರು ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಬರೇಲಿ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ವೀಡಿಯೋ ವೀಕ್ಷಿಸಿ…..

ತನ್ನ ಸಹೋದರ ಮತ್ತು ಸ್ನೇಹಿತರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಲ್ಲ. ಅವರನ್ನು ಕೊಲೆ ಮಾಡಲಾಗಿದೆ ಎಂದು ಮೃತಪಟ್ಟ ಸಮೀನ್‌ನ ಸಹೋದರ ಶಾದಾಬ್ ಮಾಧ್ಯಮಗಳಿಗೆ ತಿಳಿಸಿದ್ದಾನೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ