ನವದೆಹಲಿ: ದೇಶದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದ ನಂತರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ ಬಾರಿಯ ಅಧಿವೇಶನದಲ್ಲಿ ಸಂಸದರನ್ನು ಅಮಾನತುಗೊಳಿಸುವ ಮೂಲಕ ಕೇಂದ್ರ ಸರ್ಕಾರ ಸಂಸತ್ತಿನಿಂದ ಬಲವಂತವಾಗಿ ಈ ಕಾನೂನುಗಳನ್ನು ಅಂಗೀಕರಿಸಿದೆ. ಇದು ನ್ಯಾಯ ಸಮ್ಮತವಾಗಿ ಕಾನೂನು ಚರ್ಚೆಯಾಗಿ ಜಾರಿಗೆ ಬಂದಿಲ್ಲ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಖರ್ಗೆ, ಭಾರತ ಇನ್ನು ಮುಂದೆ ಈ ಬುಲ್ಡೋಜರ್ ನ್ಯಾಯಕ್ಕೆ ಅವಕಾಶ ನೀಡುವುದಿಲ್ಲ. ಚುನಾವಣೆಯಲ್ಲಿ ರಾಜಕೀಯ ಮತ್ತು ನೈತಿಕ ಆಘಾತದ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸಂವಿಧಾನವನ್ನು ಗೌರವಿಸುವಂತೆ ನಟಿಸುತ್ತಿದ್ದಾರೆ. ಸತ್ಯ ಏನೆಂದರೆ, ಮೂರು ಕಾನೂನುಗಳು ಇಂದಿನಿಂದ ಜಾರಿಗೆ ಬರುತ್ತಿರುವ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು 146 ಸಂಸದರನ್ನು ಅಮಾನತುಗೊಳಿಸುವ ಮೂಲಕ ಬಲವಂತವಾಗಿ ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ.
ಕಾನೂನು ವಿದ್ವಾಂಸರು, ವಕೀಲರ ಸಂಘಗಳು, ನ್ಯಾಯಾಧೀಶರು ಮತ್ತು ವಕೀಲರು ಗಮನ ಸೆಳೆದರೂ ಕೇಂದ್ರ ಸರ್ಕಾರ ಮೂರು ಕಾನೂನುಗಳಲ್ಲಿರುವ ಗಂಭೀರ ನ್ಯೂನತೆಗಳನ್ನು ನಿರ್ಲಕ್ಷಿಸಿದೆ ಎಂದು ಅವರು ತಿಳಿಸಿದ್ದಾರೆ.