ಬಸ್-ಕಾರು ಅಪಘಾತ: ಉಡುಪಿ ಮೂಲದ ಮೂವರು ಸಾವು

Prasthutha|

ರಾಮನಗರ : ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿ ಉಡುಪಿ ಮೂಲದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಕೆಮ್ಮಲ್ಲಿ ದೊಡ್ಡಿ ಗ್ರಾಮದಲ್ಲಿ ನಡೆದಿದೆ.

- Advertisement -

ಅಕ್ಷತಾ, ಡ್ರೈವರ್ ಉಮೇಶ್ ಹಾಗೂ 6 ತಿಂಗಳು ಮಗು ಸುಮಂತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

Join Whatsapp