Home ಟಾಪ್ ಸುದ್ದಿಗಳು ಮೂಡುಬಿದಿರೆಯಲ್ಲಿ ಅನೈತಿಕ ಪೊಲೀಸ್ ಗಿರಿ: ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನ

ಮೂಡುಬಿದಿರೆಯಲ್ಲಿ ಅನೈತಿಕ ಪೊಲೀಸ್ ಗಿರಿ: ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನ

ಮೂಡುಬಿದಿರೆ: ಇಲ್ಲಿನ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಬಳಿಸಹಪಾಠಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿದ್ಯಾರ್ಥಿಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.


ಪ್ರಕರಣ ಸಂಬಂಧ ವಿಜಯ್, ಅಭಿಲಾಷ್ ಹಾಗೂ ಸಂಜಯ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸೋಮವಾರ ರಾತ್ರಿ ಮೂಡಬಿದಿರೆಯ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದ ಎದುರು ತನ್ನೂರು ಬೆಂಗಳೂರಿಗೆ ಹೋಗಲು ಬಸ್ ಗೆ ಕಾಯುತ್ತಿದ್ದ ವಿದ್ಯಾರ್ಥಿನಿಯನ್ನು ಆಕೆಯ ಸಹಪಾಠಿ ವಿದ್ಯಾರ್ಥಿ ಮಾತನಾಡಿಸಿದ್ದ. ಇಬ್ಬರೂ ಮೂಡುಬಿದಿರೆಯ ಒಂದೇ ಕಾಲೇಜಿನ ಒಂದೇ ತರಗತಿಯಲ್ಲಿ ಓದುತ್ತಿದ್ದಾರೆ. ಬಸ್ ಬಂದ ಬಳಿಕ ವಿದ್ಯಾರ್ಥಿನಿ ಹತ್ತಿಕೊಂಡು ಹೋಗಿದ್ದಾಳೆ. ಆದರೆ, ಅಲ್ಲೇ ಇದ್ದ ಸಂಘಪರಿವಾರದ ಕಾರ್ಯಕರ್ತರು ಮಾತನಾಡಿಸಿದ ವಿದ್ಯಾರ್ಥಿಯು ಬೇರೆ ಸಮುದಾಯದವ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.

Join Whatsapp
Exit mobile version