ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಮಗುಚಿಬಿದ್ದ ಟ್ರಕ್: ಮೂವರು ಸ್ಥಳದಲ್ಲೇ ಸಾವು

Prasthutha|

ಅಯೋಧ್ಯೆ: ಅತಿವೇಗದಿಂದ ನಿಯಂತ್ರಣ ತಪ್ಪಿದ ಟ್ರಕ್ ಒಂದು ಡಿವೈಡರ್’ಗೆ ಡಿಕ್ಕಿ ಹೊಡೆದ ಬಳಿಕ ಶಾಲಾ ವಿದ್ಯಾರ್ಥಿಗಳ ಮೇಲೆ ಮಗುಚಿ ಬಿದ್ದ ಪರಿಣಾಮ ಮೂವರು ಬಾಲಕಿಯರು ಸ್ಥಳದಲ್ಲೇ ಮೃತಪಟ್ಟು, ಓರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.

- Advertisement -

ಶುಕ್ರವಾರ ಬೆಳಗ್ಗೆ ಎಂದಿನಂತೆ ಶಾಲೆಗೆ ಹೊರಟಿದ್ದ ವಿದ್ಯಾರ್ಥಿಗಳು ಅಯೋಧ್ಯೆ-ಲಖ್ನೊ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಟ್ರಕ್ ವಿದ್ಯಾರ್ಥಿಗಳ ಮೇಲೆ ಎರಗಿದೆ. ಪರಿಣಾಮ ಮೂವರು ವಿದ್ಯಾರ್ಥಿಗಳು ಟ್ರಕ್’ನ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಓರ್ವ ವಿದ್ಯಾರ್ಥಿನಿಯನ್ನು ಗಂಭೀರ ಗಾಯಗಳೊಂದಿಗೆಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಅದಿತ್ಯಾನಾಥ್, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ  ಹಾಗೂ ಗಾಯಾಳುವಿನ ಚಿಕಿತ್ಸೆಗಾಗಿ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.  

Join Whatsapp