ಗದಗ: ನಟ ಯಶ್ ಬರ್ತಡೇ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು.
ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ.
ತಮ್ಮ ಇಷ್ಟದ ನಟನ ಹುಟ್ಟುಹಬ್ಬವನ್ನು ಗ್ರಾಮದಲ್ಲಿ ಭರ್ಜರಿಯಾಗಿ ಮಾಡಬೇಕೆಂದು ತಡರಾತ್ರಿ ನಟ ಯಶ್ನ ಹುಟ್ಟುಹಬ್ಬದ ಬ್ಯಾನರ್ ಕಟ್ಟಲು ಹೋಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.