ಕಾರು- ಟ್ಯಾಂಕರ್ ನಡುವೆ ಅಪಘಾತ: ಮೂವರು ಯುವಕರು ಮೃತ್ಯು

Prasthutha|

ಹುಬ್ಬಳ್ಳಿ: ಕಾರು ಹಾಗೂ ಟ್ಯಾಂಕರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಬಳಿ ಸಂಭವಿಸಿದೆ.

- Advertisement -


ಮುಹಮ್ಮದ್ ಇಶಾನ್, ಮುಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಮೃತರು.


ಮೃತ ಯುವಕರನ್ನು ಹುಬ್ಬಳ್ಳಿ ನಿವಾಸಿಗಳೆಂದು ಗುರುತಿಸಲಾಗಿದೆ.

- Advertisement -


ಒಟ್ಟು 6 ಯುವಕರು ಹುಬ್ಬಳ್ಳಿಯಿಂದ ತಮ್ಮ ಕಾರಿನಲ್ಲಿ ಕಾರವಾರದ ಕಡೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಸಂಗಟಿಕೊಪ್ಪದಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾನೆ. ಘಟನೆ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp