Home ಟಾಪ್ ಸುದ್ದಿಗಳು ಕಾಲುವೆಯಲ್ಲಿ ಮುಳುಗಿ ಮೂವರು ಸಾವು

ಕಾಲುವೆಯಲ್ಲಿ ಮುಳುಗಿ ಮೂವರು ಸಾವು

ಚಿಕ್ಕಮಗಳೂರು: ನೀರಿನಲ್ಲಿ ಆಟವಾಡುವಾಗ ಆಯಾ ತಪ್ಪಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಬಳಿ ನಡೆದಿದೆ.


ಮೃತರನ್ನು ರವಿ (31), ಅನನ್ಯ (17), ಶಾಮವೇಣಿ (16) ಎಂದು ತಿಳಿದು ಬಂದಿದೆ.


ರವಿ ಮೂಲತಃ ಲಕ್ಕವಳ್ಳಿ ನಿವಾಸಿಯಾಗಿದ್ದು, ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳು. ಅನನ್ಯ ಮೂಲತಃ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರು. ಲಕ್ಕವಳ್ಳಿಯ ಸಂಬಂಧಿಕರ ಮನೆಗೆ ಬಂದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅನನ್ಯ ಮೃತದೇಹ ಪತ್ತೆಯಾಗಿದ್ದು, ಇಬ್ಬರ ಮೃತದೇಹಕ್ಕಾಗಿ ಶೋಧ ಮುಂದುವರಿದಿದೆ.
ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಬೇಟಿ ನೀಡಿ ಪರಿಶೀಲಿಸಿದ್ದಾರೆ.

Join Whatsapp
Exit mobile version