ತುಂಬೆ: ಯವತಿಗೆ ಹಲ್ಲೆ ನಡೆಸಿ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ

- Advertisement -

ಬಂಟ್ವಾಳ: ಕೊಡ್ಮಾಣಿನ ಯುವಕನೋರ್ವ ಸುಜೀರಿನ ಯುವತಿಗೆ ಹಲ್ಲೆ ನಡೆಸಿದ್ದು, ಆತನ ಮೃತದೇಹ ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ‌ಪತ್ತೆಯಾಗಿದೆ.

- Advertisement -

ಕೊಡ್ಮಾಣ್ ನಿವಾಸಿ ಸುಧೀರ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಲ್ಲೆ ನಡೆಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

ಘಟನೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -


Must Read

Related Articles