ಕರಾವಳಿ ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ

Prasthutha|

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಇಂದಿನಿಂದ ಮಂಗಳವಾರದವರೆಗೆ (ಮೇ 17) ರಾಜ್ಯಾದ್ಯಂತ ಮಳೆಯಾಗಲಿದೆ. ಈ ಬಾರಿ ಮೇ 27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ. ಬಳಿಕ ಮೂರ್ನಾಲ್ಕು ದಿನಗಳಲ್ಲಿ ಮಾನ್ಸೂನ್ ಮಂಗಳೂರನ್ನು ಪ್ರವೇಶಿಸಿ, ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ.

 ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆಯಾಗಲಿದೆ.

Join Whatsapp