Home ಟಾಪ್ ಸುದ್ದಿಗಳು ಮೈಸೂರು ಜಿಲ್ಲೆಯ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಮಳೆ

ಮೈಸೂರು ಜಿಲ್ಲೆಯ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಮಳೆ

ಮೈಸೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಿಡಿಲು, ಬಿರುಗಾಳಿಯೊಂದಿಗೆ ಸಹಿತ ಮಳೆ ಸುರಿದಿದ್ದು, ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಿದೆ.

ಬಿಳಿಕೆರೆ, ಕೆ.ಆರ್‌.ನಗರ, ಧರ್ಮಾಪುರ, ಪಿರಿಯಾಪಟ್ಟಣ, ಹುಣಸೂರು, ತಿ.ನರಸೀಪುರ, ನಂಜನಗೂಡು, ಬೆಟ್ಟದಪುರದಲ್ಲಿ ಮಳೆಯಾಗಿದೆ. ಮಳೆಯ ಫೋಟೊ ತೆಗೆದು, ವಿಡಿಯೊ ಮಾಡಿ ಹಲವರು ಸಂಭ್ರಮಿಸಿದ್ದಾರೆ.

ಮಳೆಯ ಪರಿಣಾಮ ನಗರದ ಹಲವು ರಸ್ತೆಗಳಲ್ಲಿ ಮರಗಳು ರಸ್ತೆಗೆ ಉರುಳಿ ಬಿದ್ದಿದೆ. ಮಾನಂದವಾಡಿ ರಸ್ತೆಯಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಹಂ‍ಪಾಪುರದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿಯಿತು ಶಾಲಾ ವಾಹನ ಸೇರಿದಂತೆ ಹಲವು ವಾಹನಗಳ ಮೇಲೆ ಕಂಬ-ವೈರ್‌ಗಳು ಬಿದ್ದಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Join Whatsapp
Exit mobile version