ಬೆಂಗಳೂರಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಹೆಚ್ಚಳ, ಒಂದೇ ತಿಂಗಳಲ್ಲಿ ಸಂಗ್ರಹವಾದ ದಂಡದ ಮೊತ್ತ 3 ಲಕ್ಷದ ನಲ್ವತ್ತು ಸಾವಿರ ರೂ !

Prasthutha|

ಬೆಂಗಳೂರು: ಬಿಎಂಟಿಸಿ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಟಿಕೆಟ್‌ ಪಡೆಯದೆ ಹಾಗೂ ಅನಧಿಕೃತವಾಗಿ ಪ್ರಯಾಣ ಮಾಡುವವರ ವಿರುದ್ಧ ತಪಾಸಣಾ ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳುತ್ತಿದ್ದು ನಿರ್ವಾಹಕರ ವಿರುದ್ಧವೇ 1,455 ಪ್ರಕರಣಗಳನ್ನು ದಾಖಲಿಸಿಸಲಾಗಿದೆ. ಜೊತೆಗೆ ಟಿಕೆಟ್ ಪಡೆಯದೆ ಬಿಎಂಟಿಸಿ ಬಸ್‌ಗಳಲ್ಲಿ ಸಂಚಾರ ಮಾಡಿದ ಪ್ರಯಾಣಿಕರಿಂದ ಸೆಪ್ಟಂಬರ್‌ ತಿಂಗಳೊಂದರಲ್ಲೇ 3,45,660 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಬಿಎಂಟಿಸಿ ಸಂಸ್ಥೆಯ ತನಿಖಾ ತಂಡಗಳು ಸೆಪ್ಟೆಂಬರ್ – 2021ರಲ್ಲಿ ಒಟ್ಟು 15,576 ಟ್ರಿಪ್‌ಗಳನ್ನು ತಪಾಸಣೆ ನಡೆಸಿದ್ದು, . ಈ ಸಂದರ್ಭದಲ್ಲಿ 2,209 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಅವರಿಂದ ಒಟ್ಟು ರೂ. 3,45,660 ರೂ. ದಂಡ ವಸೂಲಿ ಮಾಖಲಿಸಿದ್ದು, ನಿರ್ವಾಹಕರ ವಿರುದ್ಧವೇ 1,455 ಪ್ರಕರಣಗಳನ್ನು ದಾಖಲಿಸಿರುತ್ತಾರೆ.

- Advertisement -

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ ಪುರುಷರೂ ದಂಡಕಟ್ಟಬೇಕಾಗಿದ್ದು, 189 ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧವಾಗಿ ಒಟ್ಟು 18,900 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ ಸೆಪ್ಟೆಂಬರ್ ತಿಂಗಳೊಂದರಲ್ಲಿ 2,398 ಪ್ರಯಾಣಿಕರಿಂದ ಒಟ್ಟು ರೂ 3,64,560 ದಂಡ ವಸೂಲಿ ಮಾಡಲಾಗಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್/ ದಿನದ ಪಾಸು/ ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸಬೇಕು. ಹಾಗಾದರೆ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಜೊತೆಗೆ ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಟ್ಟು ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕು ಎಂದು ಬಿಎಂಟಿಸಿ ಸಂಸ್ಥೆ ಪ್ರಯಾಣಿಕರಲ್ಲಿ ಮನವಿ ಮಾಡಿದೆ.



Join Whatsapp