ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಬಿಜೆಪಿ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿವಾದಾಸ್ಪದ ನಟಿ ಕಂಗನಾ ರಣಾವತ್ ಅವರನ್ನು ಹಿಮಾಚಲ ಪ್ರದೇಶದ ಮಂಡಿಯಿಂದ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದೆ. ಇದೇ ವೇಳೆ ಉತ್ತರ ಪ್ರದೇಶದ ಪಿಲಿಭಿತ್‌ನಿಂದ ವರುಣ್ ಗಾಂಧಿಗೆ ಟಿಕೆಟ್ ನೀಡದೇ ಮಾಜಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರಿಗೆ ಟಿಕೆಟ್ ನೀಡಿದೆ.
ವರುಣ್ ಅವರ ತಾಯಿ ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರಿಗೆ ಟಿಕೆಟ್ ಬಿಜೆಪಿ ನೀಡಿದ್ದು, ಸುಲ್ತಾನ್‌ಪುರದಿಂದ ಕಣಕ್ಕಿಳಿಸಲಾಗಿದೆ.