Home ಟಾಪ್ ಸುದ್ದಿಗಳು ಈ ಬಾರಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್: ಡಿ.ಕೆ. ಶಿವಕುಮಾರ್

ಈ ಬಾರಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್: ಡಿ.ಕೆ. ಶಿವಕುಮಾರ್

ನವದೆಹಲಿ: ನಮಗೆ ಗೆಲುವೇ ಮಾನದಂಡವಾಗಿರುವುದರಿಂದ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಅಭ್ಯರ್ಥಿಗಳು ಮಾಡಿರುವ ಕೆಲಸ, ಹಾಕಿದ ಶ್ರಮದ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಸಿಇಸಿಯೊಂದಿಗೆ ಹಲವು ಸುತ್ತಿನ ಸಭೆ ನಡೆಸಲಾಗಿದ್ದು, ಸರ್ವೇ ಕಾರ್ಯವೂ ನಡೆದಿದೆ. ಇನ್ನು ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ ಚರ್ಚೆಯಾಗಲಿದ್ದು, ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಅಂತಿಮಗೊಳ್ಳಲಿದೆ ಎಂದರು.

ಎಐಸಿಸಿ ಅಧ್ಯಕ್ಷರು ಕರ್ನಾಟಕದವರೇ ಆಗಿರುವುದರಿಂದ ಅವರಿಗೆ ಹೊಸದಾಗಿ ಯಾವುದನ್ನೂ ವಿವರಿಸಬೇಕಾದ ಅಗತ್ಯವಿಲ್ಲ. ನಾವು ಜನರು ಹೇಳಿರುವುದನ್ನು ಹೈಕಮಾಂಡ್ ಗೆ ತಲುಪಿಸುವ ಕೆಲಸವನ್ನಷ್ಟೇ ಮಾಡುತ್ತೇವೆ. ಆಯ್ಕೆ ಪ್ರಕ್ರಿಯೆ ಅಲ್ಲಿಯೇ ನಡೆಯುತ್ತದೆ ಎಂದರು.

Join Whatsapp
Exit mobile version