ಮಡಿಕೇರಿ : ಮಾಲ್ದಾರೆ ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ

Prasthutha|

ಮಡಿಕೇರಿ: ಮಾರ್ಗೊಲ್ಲಿ ಕಾಫಿ ತೋಟದಲ್ಲಿ ಬೃಹತಾಕಾರದ ಹುಲಿಯೊಂದು ಕಾಣಿಸಿಕೊಂಡಿದೆ. ಕೆಲವು ದಿನಗಳ ಹಿಂದೆ ಇದೇ ಹುಲಿ ಆನೆ ಕಂದಕದ ಬಳಿ ಪ್ರತ್ಯಕ್ಷವಾಗಿತ್ತು.
ಇದೀಗ ಹಾಡಹಗಲೇ ಕಾಫಿ ತೋಟದಲ್ಲಿ ಕಾಣಿಸಿಕೊಳ್ಳುವ ಮೂಲಕ ಗ್ರಾಮಸ್ಥರಲ್ಲಿ ಆತಂಕವನ್ನು ಸೃಷ್ಟಿಸಿದೆ. ಕಾರ್ಮಿಕರು ತೋಟಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ.

- Advertisement -

ಕಳೆದ ಒಂದು ವಾರದಿಂದ ಹುಲಿ ಈ ಭಾಗದಲ್ಲಿ ಸಂಚರಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Join Whatsapp