Home Uncategorized ಮಡಿಕೇರಿ : ಮಾಲ್ದಾರೆ ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ

ಮಡಿಕೇರಿ : ಮಾಲ್ದಾರೆ ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ

ಮಡಿಕೇರಿ: ಮಾರ್ಗೊಲ್ಲಿ ಕಾಫಿ ತೋಟದಲ್ಲಿ ಬೃಹತಾಕಾರದ ಹುಲಿಯೊಂದು ಕಾಣಿಸಿಕೊಂಡಿದೆ. ಕೆಲವು ದಿನಗಳ ಹಿಂದೆ ಇದೇ ಹುಲಿ ಆನೆ ಕಂದಕದ ಬಳಿ ಪ್ರತ್ಯಕ್ಷವಾಗಿತ್ತು.
ಇದೀಗ ಹಾಡಹಗಲೇ ಕಾಫಿ ತೋಟದಲ್ಲಿ ಕಾಣಿಸಿಕೊಳ್ಳುವ ಮೂಲಕ ಗ್ರಾಮಸ್ಥರಲ್ಲಿ ಆತಂಕವನ್ನು ಸೃಷ್ಟಿಸಿದೆ. ಕಾರ್ಮಿಕರು ತೋಟಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ.

ಕಳೆದ ಒಂದು ವಾರದಿಂದ ಹುಲಿ ಈ ಭಾಗದಲ್ಲಿ ಸಂಚರಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Join Whatsapp
Exit mobile version