ಬೆಂಗಳೂರು: ನಟ ದರ್ಶನ್ ಅವರು ಹುಲಿ ಉಗುರು ಧರಿಸಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,ದೂರು ಕೂಡ ದಾಖಲಾಗಿತ್ತು. ಇಂದು ಅರಣ್ಯಾಧಿಕಾರಿಗಳು ದರ್ಶನ್ ಮನೆಗೆ ಬಂದಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್ ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್ ಬಳಿ ಹುಲಿ ಉಗುರು ಇರುವುದು ಖಚಿತವಾದರೆ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.