ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಇಂದು ರಾಜ್ಯಾದ್ಯಾಂತ ಕಪ್ಪು ದಿನ ಆಚರಿಸಲು ರೈತ ಸಂಫಟನೆಯ ನಾಯಕರು ಕರೆ ನೀಡಿದ್ದಾರೆ.
ಟಿಕಾಯತ್ ಮೇಲಿನ ದಾಳಿಯು ಇಡೀ ರೈತ ಸಮುದಾಯದ ಮೇಲಿನ ದಾಳಿಯಾಗಿದೆ, ಈ ಹಲ್ಲೆಯನ್ನು ಖಂಡಿಸಿ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡರಾದ ಕೆಟಿ ಗಂಗಾಧರ, ಬಡಗಲಪುರ ನಾಗೇಂದ್ರ, ಜಿಸಿ ಬಯ್ಯಾರೆಡ್ಡಿ ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಕಪ್ಪು ಪಟ್ಟಿ ಧರಿಸಿ ಭಾಗವಹಿಸಲಿದ್ದು, ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ ಎಂದು ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಟಿಕಾಯತ್ ಮುಖಕ್ಕೆ ದುಷ್ಕರ್ಮಿಯೋರ್ವ ಮಸಿ ಬಳಿದು ಹಲ್ಲೆ ನಡೆಸಿದ್ದ. ಮೋದಿ ಮೋದಿ ಎಂದು ಘೋಷಣೆ ಕೂಗಿ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಪೋಲಿಸರು ಘಟನೆ ನಡೆದ ಕೆಲಕ್ಷಣದಲ್ಲೇ ಬಂಧಿಸಿದ್ದರು.