ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್

Prasthutha|

ಹೊಸದಿಲ್ಲಿ: ಖಾಪ್ ನಿಯೋಗವು ಸರ್ಕಾರ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಗುರುವಾರ ಹೇಳಿದ್ದಾರೆ.

- Advertisement -

ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಕುಸ್ತಿಪಟುಗಳು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಖಾಪ್ ನಿಯೋಗ ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದೆ. ಖಾಪ್ ಮತ್ತು ಈ ಮಹಿಳೆಯರು (ಪ್ರತಿಭಟಿಸುವ ಕುಸ್ತಿಪಟುಗಳು) ಸೋಲಬಾರದು. ಕುರುಕ್ಷೇತ್ರದಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

- Advertisement -

ಉತ್ತರ ಪ್ರದೇಶ, ಹರ್ಯಾಣ, ಪಂಜಾಬ್ ರಾಜಸ್ಥಾನ ಮತ್ತು ದೆಹಲಿಯ ಖಾಪ್‌ಗಳ ಪ್ರತಿನಿಧಿಗಳು ಗುರುವಾರ ಮುಜಫರ್‌ನಗರದ ಸೋರಂ ಗ್ರಾಮದಲ್ಲಿ ಬ್ರಿಜ್ ಭೂಷಣ್ ಮೇಲಿನ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಮಹಿಳಾ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆಗಳ ಕುರಿತು ಚರ್ಚಿಸಲು ಸಭೆ ನಡೆಸಿದ್ದಾರೆ.

ಹರ್ಯಾಣದಲ್ಲಿ ಇಂದು ಮತ್ತೊಂದು ಪಂಚಾಯತ್

ಮಹಾಪಂಚಾಯತ್‌ನಲ್ಲಿ, ಖಾಪ್‌ಗಳು ಶುಕ್ರವಾರ ಕುರುಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಸಲಿದ್ದು, ಅಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಕೇಶ್ ಟಿಕಾಯತ್ ಹೇಳಿದರು. ಕುಸ್ತಿಪಟುಗಳ ಬೆಂಬಲಕ್ಕೆ ಖಾಪ್‌ಗಳ ಪ್ರತಿನಿಧಿಗಳು ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದ್ದು, ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದಿದ್ದಾರೆ.