ಏ. 23ರವರೆಗೆ ಬಿಆರ್ ಎಸ್ ನಾಯಕಿ ಕೆ. ಕವಿತಾಗೆ ನ್ಯಾಯಾಂಗ ಬಂಧನ

Prasthutha|

ನವದೆಹಲಿ: ಬಿಆರ್ ಎಸ್ ನಾಯಕಿ ಕೆ. ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ನ್ಯಾಯಾಲಯ ಸೋಮವಾರ ಆದೇಶಿಸಿದೆ.

- Advertisement -


ಕವಿತಾ ಅವರ 3 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಸಿಬಿಐ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.


ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್ನ ಬಂಜಾರಾ ಹಿಲ್ಸ್ನ ನಿವಾಸದಿಂದ ಬಂಧಿಸಿ ತಿಹಾರ್ ಜೈಲಿನಲ್ಲಿ ಇರಿಸಿತ್ತು.

Join Whatsapp