ಶಿವಮೊಗ್ಗ: ಪಕ್ಷೇತರ ಸ್ಪರ್ಧೆಗೆ ಸಿದ್ಧವಾಗಿರುವ ಈಶ್ವರಪ್ಪರನ್ನು ಬಿಜೆಪಿಗೆ ವಾಪಸ್ಸಾಗಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಪಸ್ ಬರಲು ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು ಪಕ್ಷದ ಹಿತದೃಷ್ಟಿಯಿಂದ ಕೆ.ಎಸ್.ಈಶ್ವರಪ್ಪ ಅವರು ನಮ್ಮೊಂದಿಗೆ ಕೈಜೋಡಿಸಬೇಕು. ಈಶ್ವರಪ್ಪರವರೇ ನೀವು ಹಿರಿಯರು. ರಾಜ್ಯದಲ್ಲಿ ಬಿಜೆಪಿ ಕಟ್ಟಲು ನಿಮ್ಮದೂ ದೊಡ್ಡ ಪಾಲಿದೆ. ಯಾವುದೋ ಪರಿಸ್ಥಿತಿ, ತಪ್ಪು ಸಂದರ್ಭ ತಮ್ಮನ್ನು ಈ ಸನ್ನಿವೇಶಕ್ಕೆ ದೂಡಿದೆ. ಕಾಲ ಮಿಂಚಿಲ್ಲ, ವಾಪಸ್ ಬನ್ನಿ ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಬಿ.ವೈ. ರಾಘವೇಂದ್ರ ಮಾಡಿರುವ ಅಭಿವೃದ್ಧಿಯ ಬಗ್ಗೆ ಜನರು ಮಾತಾಡುತ್ತಿದ್ದಾರೆ. ಹೀಗಾಗಿ ಅವರು ಈ ಬಾರಿ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಈಶ್ವರಪ್ಪ ಅವರಿಗೆ ಇನ್ನೂ ಕಾಲ ಮಿಂಚಿಲ್ಲ. ವಾಪಸ್ ಬಂದು ನಮ್ಮ ಜೊತೆ ಕೈ ಜೋಡಿಸಿ ಎಂದು ಮತ್ತೊಮ್ಮೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ವಿಜಯೇಂದ್ರ ಹೇಳಿದರು.