Home ಟಾಪ್ ಸುದ್ದಿಗಳು ಹೆಚ್‌‌ಎಸ್‌‌ಆರ್‌‌ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಜೂನ್‌ 12 ರವರೆಗೆ ಕಾಲಾವಕಾಶ

ಹೆಚ್‌‌ಎಸ್‌‌ಆರ್‌‌ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಜೂನ್‌ 12 ರವರೆಗೆ ಕಾಲಾವಕಾಶ

ಬೆಂಗಳೂರು: ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ (HSRP) ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಸರಕಾರ ಸಿಹಿಸುದ್ದಿ ನೀಡಿದ್ದು, ಜೂನ್‌ 12 ರವರೆಗೆ ಹೆಚ್‌‌ಎಸ್‌‌ಆರ್‌‌ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಕಾಲಾವಕಾಶ ನೀಡಿದೆ.

ಹೆಚ್​​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್​ ಮುಂದೆ ಈ ರಿಟ್​ ಅರ್ಜಿ ವಿಚಾರಣೆಗೆ ಬಂದಿದೆ.

ಆದರೆ, ಹಲವು ರಿಟ್ ಅರ್ಜಿಗಳ ವಿಚಾರಣೆ ಜೂನ್ 11ಕ್ಕೆ ನಿಗದಿಯಾಗಿದೆ. ಹೀಗಾಗಿ ಹೀಗಾಗಿ ಜೂನ್ 12 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರದ ಪರವಾಗಿ ಎಎಜಿ ರೂಬೆನ್ ಜೇಕಬ್ ಅವರು ಹೈಕೋರ್ಟ್​​ಗೆ ಹೇಳಿದ್ದಾರೆ. ಎಎಜಿ ರೂಬೆನ್ ಜೇಕಬ್ ಅವರ ಈ ಹೇಳಿಕೆಯನ್ನು ದಾಖಲಿಸಿಕೊಂಡ ಹೈಕೋರ್ಟ್​ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.

ರಾಜ್ಯದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿರುವ ಸುಮಾರು 2 ಕೋಟಿ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನ, ಪ್ರಯಾಣಿಕ ಕಾರುಗಳು, ಮಧ್ಯಮ, ಭಾರಿ ವಾಣಿಜ್ಯ ವಾಹನ, ಟ್ರೈಲರ್‌, ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.

Join Whatsapp
Exit mobile version