ಬೈಕ್​ಗೆ ಡಿಕ್ಕಿ ಹೊಡೆದ ಟಿಪ್ಪರ್: ಸ್ಥಳದಲ್ಲೇ ಅತ್ತೆ, ಅಳಿಯ ಸಾವು, ಮಕ್ಕಳಿಬ್ಬರಿಗೆ ಗಾಯ

Prasthutha|

ವಿಜಯಪುರ: ಬೈಕ್​ಗೆ ಟಿಪ್ಪರ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ, ನಾಗೇಶ್ ಶಿವಪುರ ಮೃತರು. ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಬೆನ್ನಟ್ಟಿ ಟಿಪ್ಪರ್ ವಾಹನದ ಚಾಲಕನನ್ನು ಸ್ಥಳೀಯ ನಿವಾಸಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -

ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -