ಮೈಸೂರು: ಟಿಪ್ಪು ಎಕ್ಸ್‌ಪ್ರೆಸ್ ಬದಲು ಒಡೆಯರ್ ಎಕ್ಸ್‌ಪ್ರೆಸ್ ರೈಲು ಎಂದು ಮರುನಾಮಕರಣ ಮಾಡುವಂತೆ ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾಗಿ ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮೈಸೂರು ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಆದ್ದರಿಂದ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡುವಂತೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ.
ಈ ಹಿಂದೆ ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡುವಂತೆಯೂ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು.