‘ಟಿಪ್ಪು ಎಕ್ಸ್‌ಪ್ರೆಸ್‌’ ಬದಲು ‘ಒಡೆಯರ್ ಎಕ್ಸ್‌ಪ್ರೆಸ್‌’ ಎಂದು ಮರುನಾಮಕರಣ ಮಾಡಬೇಕು:ಸಂಸದ ಪ್ರತಾಪ್ ಸಿಂಹ

Prasthutha|

ಮೈಸೂರು:  ಟಿಪ್ಪು ಎಕ್ಸ್​ಪ್ರೆಸ್ ಬದಲು ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ಮರುನಾಮಕರಣ ಮಾಡುವಂತೆ  ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. 

- Advertisement -

ರೈಲ್ವೇ ಸಚಿವ ಅಶ್ವಿನಿ‌ ವೈಷ್ಣವ್‌ ರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾಗಿ ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮೈಸೂರು  ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಆದ್ದರಿಂದ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಮರುನಾಮಕರಣ ಮಾಡುವಂತೆ   ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ.

ಈ  ಹಿಂದೆ  ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡುವಂತೆಯೂ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು.

Join Whatsapp