ಟಿಪ್ಪು ಜಯಂತಿ ಹಿನ್ನೆಲೆ : ನಾಳೆ ಕೊಡಗಿನಾದ್ಯಂತ ನಿಷೇಧಾಜ್ಞೆ ಜಾರಿ

Prasthutha|

ಮಡಿಕೇರಿ : ಟಿಪ್ಪು ಜಯಂತಿ ಹಿನ್ನೆಲೆ ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

- Advertisement -

ಟಿಪ್ಪು ಜಯಂತಿ ಆಚರಣೆ ಈ ಮೊದಲು ವಿವಾದ ಸೃಷ್ಟಿಸಿತ್ತು. ಈ ಬಗ್ಗೆ ರಾಜಕೀಯ ಪಕ್ಷಗಳು ವಾದ, ಪ್ರತಿವಾದ ಮಾಡಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಇದೀಗ ನಾಳೆ (ನವೆಂಬರ್ 10) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Join Whatsapp