Home ಟಾಪ್ ಸುದ್ದಿಗಳು ಟಿಪ್ಪು ಸುಲ್ತಾನ್ ಕನ್ನಡ ನಾಡಿನ ಸ್ವಾಭಿಮಾನದ ಸಂಕೇತ: ಬಿಜೆಪಿ ಎಂಎಲ್ ಸಿ ವಿಶ್ವನಾಥ್

ಟಿಪ್ಪು ಸುಲ್ತಾನ್ ಕನ್ನಡ ನಾಡಿನ ಸ್ವಾಭಿಮಾನದ ಸಂಕೇತ: ಬಿಜೆಪಿ ಎಂಎಲ್ ಸಿ ವಿಶ್ವನಾಥ್

ಮೈಸೂರು: ಟಿಪ್ಪು ಸುಲ್ತಾನ್ ಕನ್ನಡ ನಾಡಿನ ಸ್ವಾಭಿಮಾನದ ಸಂಕೇತ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದ್ದಾರೆ.


ಕನ್ನಡ ರಾಜ್ಯೋತ್ಸವ ಹಾಗೂ ಟಿಪ್ಪು ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರು ರಂಗಾಯಣದ ನಿರ್ದೇಶಕ ಅಡ್ಡoಡ ಕಾರ್ಯಪ್ಪ ಅಲ್ಲ. ಆತ ಅಡ್ನಾಡಿ ಕಾರ್ಯಪ್ಪ. ಆತ ಟಿಪ್ಪುವಿನ ಬಗ್ಗೆ ಪುಸ್ತಕ ಬರೆಯಲು ಟಿಪ್ಪು ಕಾಲದಲ್ಲಿ ಹುಟ್ಟಿದ್ದನಾ? ಅವನು ಬರೆದಿರುವ ಪುಸ್ತಕ ‘ಟಿಪ್ಪು ನಿಜ ಕನಸು’ಗಳನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.


ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರ ಇತಿಹಾಸವನ್ನು ತಿರುಚುವ ಕೆಲಸ ಯಾರೂ ಮಾಡಬಾರದು. ಮೈಸೂರು ಹುಲಿ ಟಿಪ್ಪು ಸುಲ್ತಾನ್ ರವರ ಆದರ್ಶ ಆಡಳಿತ, ಧೈರ್ಯ, ಶೌರ್ಯ, ಕೆಚ್ಚೆದೆಯ ಹೋರಾಟಗಳನ್ನು ಯಾರೂ ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದರು. ಟಿಪ್ಪು 80 ಸಾವಿರ ಜನರನ್ನು ಕೊಂದ, 40 ಸಾವಿರ ಜನರನ್ನು ಮತಾಂತರ ಮಾಡಿದ ಎಂಬುದು ಕಥೆಯಷ್ಟೇ. ಏಕೆಂದರೆ ಅಂದಿನ ಜನಸಂಖ್ಯೆಗೆ ಹೋಲಿಕೆ ಮಾಡಿದರೆ ಇದು ತಾಳೆ ಆಗುವುದು ಇಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ.

Join Whatsapp
Exit mobile version