Home ಟಾಪ್ ಸುದ್ದಿಗಳು ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ: ಸಿರವಾರದಲ್ಲಿ ಪ್ರತಿಭಟನೆ

ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ: ಸಿರವಾರದಲ್ಲಿ ಪ್ರತಿಭಟನೆ

ರಾಯಚೂರು: ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆದಿದೆ.


ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಹಿನ್ನೆಲೆ ಸಿರವಾರದಲ್ಲಿ ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.


ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ. ಸದ್ಯ ಸಿರವಾರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಕುಳಿತು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಪೊಲೀಸರು ಸ್ಥಳದಲ್ಲಿ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಟಿಪ್ಪು ಸುಲ್ತಾನ್‌ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳ ಪತ್ತೆಗೆ ಸ್ಥಳೀಯ ಸಿಸಿ ಟಿವಿ ಫೂಟೇಜ್‌ ಗಳ ಪರಿಶೀಲನೆ ಸೇರಿದಂತೆ ಅಗತ್ಯ ತನಿಖಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.

Join Whatsapp
Exit mobile version