March 10, 2021

ಉತ್ತರಾಖಂಡ ಮುಖ್ಯಮಂತ್ರಿಯಾಗಿ ತೀರತ್ ಸಿಂಗ್ ರಾವತ್ ; ಸಂಜೆ 4ಕ್ಕೆ ಪ್ರಮಾಣ ವಚನ

ಡೆಹ್ರಾಡೂನ್​:  ಉತ್ತರಾಖಂಡದ ಮುಖ್ಯಮಂತ್ರಿಯಾಗಿ ತೀರತ್ ಸಿಂಗ್ ರಾವತ್ ಅವರು ಆಯ್ಕೆಯಾಗಿದ್ದಾರೆ. ತೀರತ್​ ಸಿಂಗ್​ ಅವರು ಇಂದು ಸಂಜೆ ನಾಲ್ಕು ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ತೀರತ್​ ಅವರು ಫೆ. 9, 2013 ರಿಂದ ಡಿಸೆಂಬರ್​ 31, 2015ರವರೆಗೂ ಉತ್ತರಖಂಡದ ಬಿಜೆಪಿ ಮುಖ್ಯಸ್ಥರಾಗಿದ್ದರು. 2012 ರಿಂದ 2017ರವರೆಗೆ ಉತ್ತರಖಂಡದ ಚೌಬ್ತಖಾಲ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಪ್ರಸ್ತುತ ಗರ್ವಾಲ್​ ಕ್ಷೇತ್ರದ ಸಂಸದರಾಗಿದ್ದಾರೆ.

ತ್ರಿವೇಂದ್ರ ಸಿಂಗ್​ ಅವರು ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಗೆ ಮಂಗಳವಾರ ಸಂಜೆ ರಾಜೀನಾಮೆ ಪತ್ರ ನೀಡಿದ ಬಳಿಕ ನಾಲ್ಕು ವರ್ಷಗಳ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಬಿಜೆಪಿ ನನಗೆ ಅವಕಾಶ ಮಾಡಿಕೊಟ್ಟಿದೆ. ಅದಕ್ಕೆ ನಾನು ಋಣಿಯಾಗಿದ್ದೇನೆ ಎಂದು ಅವರು ಹೇಳಿದ್ದರು.

ರಾಜೀನಾಮೆಗೆ ಕಾರಣವೇನೆಂದು ಕೇಳಿದಾಗ, ಅದಕ್ಕೆ ಕಾರಣವನ್ನು ನೀವು ದೆಹಲಿಯಲ್ಲಿರುವ ಬಿಜೆಪಿ ನಾಯಕರನ್ನು ಕೇಳಬೇಕು ಎಂದಿದ್ದರು. ಪಕ್ಷದಲ್ಲಿನ ಎಲ್ಲಾ ನಿರ್ಧಾರಗಳನ್ನು ಸಾಮೂಹಿಕ ರೀತಿಯಲ್ಲಿ ತೆಗೆದುಕೊಳ್ಳಲಾಗುವುದರಿಂದ ಬೇರೊಬ್ಬರಿಗೆ ಅಧಿಕಾರವನ್ನು ರವಾನಿಸಬೇಕು ಎಂದು ಪಕ್ಷವು ಒಟ್ಟಾಗಿ ನಿರ್ಧರಿಸಿದೆ. ಅದಕ್ಕೆ ಕಾರಣವನ್ನು ನೀವು ದೆಹಲಿಯಲ್ಲೇ ಕೇಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದರು.

ತ್ರಿವೇಂದ್ರ ಅವರ ಕಾರ್ಯಶೈಲಿ ವಿಭಿನ್ನವಾಗಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಹಲವಾರು ಉತ್ತರಾಖಂಡ ಮಂತ್ರಿಗಳು ಮತ್ತು ಶಾಸಕರು ಹೈ ಕಮಾಂಡ್​ಗೆ ಮನವಿ ಮಾಡಿದ್ದರು ಎನ್ನಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!